alex Certify ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ: ತಾಲ್ಲೂಕಿನ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 9 ಅಂಗನವಾಡಿ ಸಹಾಯಕಿಯರು, ಸೋಮವಾರಪೇಟೆ  ತಾಲ್ಲೂಕಿನ 16 ಅಂಗನವಾಡಿ ಸಹಾಯಕಿಯರು ಮತ್ತು ಪೊನ್ನಂಪೇಟೆ ತಾಲ್ಲೂಕಿನ  9 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 25 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಆನ್‍ಲೈನ್ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ 4 ರಿಂದ 9 ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು. 18 ರಿಂದ 35 ವರ್ಷ ವಯೋಮಿತಿಯೊಳಗಿರುವ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇರುತ್ತದೆ. ಆದರೆ ಸಹಾಯಕಿ ಹುದ್ದೆಗೆ ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್‍ಸೈಟ್ www.anganwadirecruit.kar.nic.in ನಲ್ಲಿ ಅರ್ಜಿಯನ್ನು ಭರ್ತಿ ಮಾಡಬಹುದಾಗಿದೆ.  ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗಿದ್ದು, ಇತರೇ ಯಾವುದೇ ರೂಪದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ-08272-298379, ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ-7406296645, ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ-08276-282281, ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ-08274-249010 ನ್ನು ದೂರವಾಣಿ ಸಂಖ್ಯೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...