ಚಿತ್ರದುರ್ಗ: ಹೊಸದುರ್ಗ, ಚಳ್ಳಕೆರೆ ಹಾಗೂ ಹಿರಿಯೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೊಸದುರ್ಗ ತಾಲೂಕಿನಲ್ಲಿ 07 ಅಂಗನವಾಡಿ ಕಾರ್ಯಕರ್ತೆ, 04 ಮಿನಿ ಅಂಗನವಾಡಿ ಕಾರ್ಯಕರ್ತೆ 12 ಸಹಾಯಕಿ, ಚಳ್ಳಕೆರೆ ತಾಲೂಕಿನಲ್ಲಿ 42 ಅಂಗನವಾಡಿ ಕಾರ್ಯಕರ್ತೆ ಹಾಗೂ 70 ಸಹಾಯಕಿ, ಹಿರಿಯೂರು ತಾಲೂಕಿನಲ್ಲಿ 05 ಅಂಗನವಾಡಿ ಕಾರ್ಯಕರ್ತೆ, 01 ಮಿನಿ ಅಂಗನವಾಡಿ ಕಾರ್ಯಕರ್ತೆ 33 ಸಹಾಯಕಿ ಹುದ್ದೆಗಳು ಖಾಲಿಯಿವೆ.
ಅರ್ಹ ಸ್ಥಳೀಯ ಅಭ್ಯರ್ಥಿಗಳು ವಿದ್ಯಾರ್ಹತೆ ಮತ್ತು ಷರತ್ತುಗಳಿಗೆ ಒಳಪಟ್ಟು ಅರ್ಜಿ ಸಲ್ಲಿಸಬಹುದು. ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ಹೊಸದುರ್ಗ ತಾಲೂಕಿನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 26 ಸಂಜೆ 5:30 ಹಾಗೂ ಚಳ್ಳಕೆರೆ ಮತ್ತು ಹಿರಿಯೂರು ತಾಲೂಕಿನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 27 ರಂದು ಸಂಜೆ 5.30 ಕಡೆಯ ದಿನವಾಗಿದೆ. ಅಭ್ಯರ್ಥಿಗಳು ಖುದ್ದಾಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ದಾಖಲಾತಿಗಳೊಂದಿಗೆ ಆಯಾ ತಾಲೂಕು ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ಕಚೇರಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ, ಹೊಸದುರ್ಗ ದೂರವಾಣಿ ಸಂಖ್ಯೆ 08199-200018, ಚಳ್ಳಕೆರೆ ದೂರವಾಣಿ ಸಂಖ್ಯೆ 08195-200042, ಹಿರಿಯೂರು ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ಕಚೇರಿ ದೂರವಾಣಿ ಸಂಖ್ಯೆ 08193-263512 ಕರೆ ಮಾಡಬಹುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಮತ್ತು ಹೊಸದಾಗಿ ಪ್ರಾರಂಭಿಸಿರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ (ಭೌತಿಕವಾಗಿ) ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ದೇವನಹಳ್ಳಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಮತ್ತು 37 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಗುರುತಿಸಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಆಫ್‌ಲೈನ್ (ಭೌತಿಕವಾಗಿ) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಕಛೇರಿ ವೇಳೆಯಲ್ಲಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಛೇರಿ, ದೇವನಹಳ್ಳಿ ಇಲ್ಲಿ ಪಡೆಯುವುದು ಮತ್ತು 2023ರ ಏಪ್ರಿಲ್ 24 ರವರೆಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ದಿನಾಂಕ ಮತ್ತು ಸಮಯದೊಳಗೆ ಎಲ್ಲಾ ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ದೇವನಹಳ್ಳಿ ಇಲ್ಲಿ ಇಡಲಾಗಿರುವ ಸ್ವೀಕೃತಿ ಬಾಕ್ಸ್ ನಲ್ಲಿ ಹಾಕುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 29565103 ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, 2ನೇ ಮಹಡಿ, ಅಕ್ಷಯ ಭವನ, ಪಿ.ಎಲ್.ಡಿ ಬ್ಯಾಂಕ್ ಬಿಲ್ಡಿಂಗ್, ಬಿ.ಬಿ ರಸ್ತೆ, ದೇವನಹಳ್ಳಿ ಟೌನ್ ಇಲ್ಲಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.