ಹೊಸಪೇಟೆ: ವಿಜಯನಗರ ಜಿಲ್ಲೆ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನೆಯಡಿ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ಮತತ್ಉ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
15 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 48 ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ಅರ್ಜಿಗಳನ್ನು ಸೆ. 7 ರಿಂದ ಅ. 6 ರ ಸಂಜೆ 5.30 ರೊಳಗಾಗಿ ವೆಬ್ಸೈಟ್ www.anganwadirecruit.kar.nic.in ನಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.