alex Certify ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ

ಬೆಂಗಳೂರು: ಕೊರೆಯುವ ಚಳಿಯಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರೆದಿದೆ. 10,000ಕ್ಕೂ ಹೆಚ್ಚು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಹೋರಾತ್ರಿ ಹೋರಾಟ ನಡೆಸಲಾಗಿದೆ.

ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿ ಮಲಗಿ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ಕೈಗೊಂಡಿದ್ದಾರೆ. ಸಿಐಟಿಯು ಸಂಘಟನೆಯ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ ಮುಂದುವರೆದಿದೆ. ಬೇಡಿಕೆ ಈಡೇರಿಸುವವರೆಗೂ ಫ್ರೀಡಂ ಪಾರ್ಕ್ ನಿಂದ ತೆರಳುವುದಿಲ್ಲವೆಂದು ಪಟ್ಟು ಹಿಡಿದು ಹೋರಾಟ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...