alex Certify ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ರೂ. ಗೌರವಧನಕ್ಕೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ರೂ. ಗೌರವಧನಕ್ಕೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ರಾಜ್ಯದಾದ್ಯಂತ ಇಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆ ಕೈಗೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ ಪ್ರತಿಭಟನೆಗೆ ಕರೆ ನೀಡಿದೆ.

ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಲಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ರೂ., ಸಹಾಯಕಿಯರಿಗೆ 10,000 ರೂ. ಗೌರವ ಧನ ನೀಡುವುದಾಗಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಭರವಸೆ ನೀಡಿದ್ದು, ಈ ಭರವಸೆಯನ್ನು ಈಡೇರಿಸಬೇಕೆಂದು ಆಗ್ರಹಿಸಿ ಧರಣಿ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...