alex Certify ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

 ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ಸೊರಬ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕಾರ್ಯಕರ್ತೆಯರ ಹುದ್ದೆ:

ಸೊರಬ ತಾಲೂಕು ಬಿಳಗಲಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ  ಅಂಗನವಾಡಿ ಕಾರ್ಯಕರ್ತೆಯ ಒಂದು ಹುದ್ದೆಗೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35ವರ್ಷ ವಯೋಮಿತಿಯೊಳಗಿನ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾದ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅಂಗನವಾಡಿ ಸಹಾಯಕಿಯರ ಹುದ್ದೆ

ಗಿಣಿವಾಲ, ಗಂಗವಳ್ಳಿ, ಉಳವಿ-2, ಬನದಕೊಪ್ಪ, ಕಾನುಕೊಪ್ಪ ಹೊಸೂರು ಮತ್ತು ತತ್ತೂರು ಗ್ರಾಮಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲಿಚ್ಚಿಸುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ತಮ್ಮ ಪ್ರಸ್ತಾವನೆಯನ್ನು www.anganwadirecruit.kar.nic.in ಆನ್‍ಲೈನ್ ಮೂಲಕ ಸೆಪ್ಟಂಬರ್ 16 ರೊಳಗಾಗಿ ಸಲ್ಲಿಸುವಂತೆ ಹಾಗೂ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸುವಂತೆ ಸೊರಬ ತಾ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...