ಬೆಂಗಳೂರು : ಗ್ಯಾರಂಟಿ ಘೋಷಣೆಗಳ ಈಡೇರಿಕೆಗೆ ವಿಪಕ್ಷಗಳು ಹಾಗೂ ಜನರು ಪಟ್ಟು ಹಿಡಿದ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದ್ದು, ಜೂ.27 ರಂದು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ.
ಕಾಂಗ್ರೆಸ್ ನೀಡಿದ್ದ 6 ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಅಂಗನವಾಡಿ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದು, ಜೂ.27 ರಂದು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ.
ಭರವಸೆ ನೀಡಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ವೇತನ, ಸಹಾಯಕಿಯರಿಗೆ 10 ಸಾವಿರ ವೇತನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಂಚಣಿ ಸೌಕರ್ಯವಿಲ್ಲ, ಹಾಗಾಗಿ ಅವರು ಸೇವಾ ನಿವೃತ್ತಿ ಹೊಂದಿದರೆ ಅಥವಾ ನಿಧನರಾದರೆ 3 ಲಕ್ಷ ಹಾಗೂ ಕಿರಿಯ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಲಕ್ಷ ನೀಡಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ.ಜೂನ್ 27 ರಂದು ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತೇವೆ, ಬಿಸಿಯೂಟ, ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಕಾಂಗ್ರೆಸ್ ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಜಯಮ್ಮ ಹೇಳಿದ್ದಾರೆ.