ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಕಳೆದ 3 ತಿಂಗಳಿನಿಂದ ಸಿಗದ ಗೌರವಧನ ಬಿಡುಗಡೆಯಾಗದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಕೆಲವರು ತಮ್ಮ ಕುಟುಂಬ ನಿರ್ವಹಣೆಗಾಗಿ ಇದೇ ಕೆಲಸವನ್ನು ಅವಲಂಬಿಸಿದ್ದು, ಸಕಾಲಕ್ಕೆ ಹಣ ಸಿಗದೇ ಇದ್ದರೆ ಕುಟುಂಬ ನಿರ್ವಹಣೆ ಕಷ್ಟ ಎಂದು ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.
ಅಲ್ಲದೇ ಬಾಣಂತಿ ಹಾಗೂ ಮಕ್ಕಳಿಗೆ ನೀಡುವ ಮೊಟ್ಟೆಯು ಬಾರದೇ ತಮ್ಮ ಕೈಯಿಂದ ಹಣ ಹಾಕಿ ಮೊಟ್ಟೆ ಖರೀದಿ ಮಾಡಲಾಗುತ್ತಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೇತನದ ಜೊತೆ ಪ್ರೋತ್ಸಾಹ ಧನ ಕೂಡ ವಿಳಂಬವಾಗಿದ್ದು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ತಾಲೂಕು ಸಿಬ್ಬಂದಿಗೆ ಮೂರು ತಿಂಗಳಿಗೊಮ್ಮೆ ವೇತನ ನೀಡಲಾಗುತ್ತಿದೆ. ಇದರಿಂದಾಗಿ ಜೀವನ ನಿರ್ವಹಣೆ ಕಷ್ಟವಾಗಿದೆ ಎಂಬ ಆರೋಪ ಕೇಳಿ ಬಂದಿದೆ.