alex Certify ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು : ಸೆ.15 ರಂದು ಪ್ರತಿಭಟನೆಗೆ ಕರೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು : ಸೆ.15 ರಂದು ಪ್ರತಿಭಟನೆಗೆ ಕರೆ!

ಬೆಂಗಳೂರು : ರಾಜ್ಯ ಸರ್ಕಾರವು 262 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಸಿದ್ಧತೆ ನಡೆಸಿರುವುದನ್ನು ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಸೆಪ್ಟೆಂಬರ್ 15 ಕ್ಕೆ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ರಾಜ್ಯ ಸರ್ಕಾರವು ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಮುಂದಾಗಿದೆ. ಆದರೆ ಈ ಆದೇಶದಿಂದ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಬರಲಿದೆ. ಹೀಗಾಗಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ವಿರೋಧಿಸಿ ಸೆಪ್ಟೆಂಬರ್ 15 ರಂದು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗೆ ಮುಂದಾಗಿದ್ದಾರೆ.

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಬಾರದು, ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು. ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಿದ್ರೆ ಅಂಗನವಾಡಿಗೆ ಮಕ್ಕಳ ಸಂಖ್ಯೆ ಕಡಿಮೆಯಾಗಿ ಅಂಗನವಾಡಿ ಕೇಂದ್ರಗಳು ಮುಚ್ಚುವ ಹಂತಕ್ಕೆ ಬರಬಹುದು ಹೀಗಾಗಿ ಸರ್ಕಾರ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...