ಬೆಂಗಳೂರು: ಕಾಡುಪ್ರಾಣಿಯಿಂದ ಹಸು, ಎಮ್ಮೆ, ಕೋಣ ಮೃತಪಟ್ಟರೆ ಅವುಗಳ ಮಾಲೀಕರಿಗೆ ನೀಡಲಾಗುತ್ತಿದ್ದ ಪರಿಹಾರ ಹಣವನ್ನು 75 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿದೆ. ಕುರಿ, ಮೇಕೆ ಮೃತಪಟ್ಟಲ್ಲಿ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.
ಅರಣ್ಯ ಸಚಿವ ಅರವಿಂದ ಲಿಂಬಾವಳಿ ಈ ಬಗ್ಗೆ ಮಾಹಿತಿ ನೀಡಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ. ಕಾಡು ಪ್ರಾಣಿಗಳಿಂದ ಜಾನುವಾರು ಮೃತಪಟ್ಟಲ್ಲಿ 10 ಸಾವಿರ ರೂಪಾಯಿ ಪರಿಹಾರ ನೀಡುತ್ತಿದ್ದು, ಅದನ್ನು 75 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಕುರಿ, ಮೇಕೆ ಮೃತಪಟ್ಟ ಸಂದರ್ಭದಲ್ಲಿ 5 ಸಾವಿರ ರೂಪಾಯಿ ಪರಿಹಾರ ನೀಡುತ್ತಿದ್ದು, ಅದನ್ನು 10 ಸಾವಿರ ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗಿದೆ.