ಬೆಂಗಳೂರು: ಮಾನವ –ವನ್ಯಜೀವಿ ಸಂಘರ್ಷ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಅನುದಾನ ಘೋಷಿಸಿದ್ದಾರೆ.
ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳಿಂದ ಸಂಭವಿಸುತ್ತಿರುವ ಸಾವು- ನೋವು ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆನೆ ಮತ್ತು ಚಿರತೆ ಕಾರ್ಯಪಡೆಗಳ ಬಲವರ್ಧನೆಗೆ 40 ಕೋಟಿ ರೂ. ಮೀಸಲಿಟ್ಟಿದ್ದಾರೆ.
ಹಾಗೆಯೇ, ಬಂಡೀಪುರದಲ್ಲಿ ಹೊಸ ಕಾರ್ಯಪಡೆ ರಚನೆ, ಹೆಚ್ಚುವರಿ ಮಾನವ ಸಂಪನ್ಮೂಲ ಹಾಗೂ ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲಪಡಿಸಲು 10 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಮಾನವ ವನ್ಯಜೀವಿ ಸಂಘರ್ಷ ತಡೆಗೆ ಬ್ಯಾರಿಕೇಡ್‌ಗಳ ನಿರ್ಮಾಣ ಮಾಡಲಾಗುತ್ತಿದೆ.