
ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಅವರನ್ನು ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಗುರುವಾರ ರಾತ್ರಿ ದಾವಣಗೆರೆಯಲ್ಲಿ ಬಂಧಿಸಿದ್ದಾರೆ.
ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಅವರನ್ನು ಆಟೋ ಚಾಲಕ ವಿಶ್ವನಾಥ ಅಲಿಯಾಸ್ ಗಿರೀಶ್ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ. ಈತನ ಚಲನವಲನ ಹುಬ್ಬಳ್ಳಿ ಗೋಕುಲ್ ರಸ್ತೆಯ ಹೊಸ ಬಸ್ ನಿಲ್ದಾಣದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಜಾಡು ಹಿರಿದು ದಾವಣಗೆರೆ, ಶಿವಮೊಗ್ಗ, ಮೈಸೂರಿನಲ್ಲಿ ಹುಡುಕಾಟ ನಡೆಸಿದ್ದರು. ಆರೋಪಿಯನ್ನು ದಾವಣಗೆರೆಯಲ್ಲಿ ಬಂಧಿಸಲಾಗಿದ್ದು, ತಡರಾತ್ರಿಯೇ ಹುಬ್ಬಳ್ಳಿಗೆ ಕರೆತರಲಾಗಿದೆ ಎಂದು ಹೇಳಲಾಗಿದೆ.