
ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ವಿದ್ಯಾರ್ಥಿನಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ತಲೆ ದಂಡವಾಗಿದೆ.
ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಈ ಹಿಂದೆ ಇನ್ಸ್ ಪೆಕ್ಟರ್ ಮತ್ತು ಮಹಿಳಾ ಹೆಡ್ ಕಾನ್ಸ್ ಟೆಬಲ್ ಅಮಾನತು ಮಾಡಲಾಗಿತ್ತು. ಹುಬ್ಬಳ್ಳಿ -ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಪಿ. ರಾಜೀವ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಡಿಸಿಪಿ ರಾಜೀವ್ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಈ ಪ್ರಕರಣದಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ಅಂಜಲಿ ಹತ್ಯೆ ಪ್ರಕರಣದಲ್ಲಿ ಇದುವರೆಗೆ ಮೂವರು ಪೊಲೀಸರ ಅಮಾನತು ಮಾಡಿದಂತಾಗಿದೆ.