alex Certify ಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ: KSRTC ಬಸ್ ಡಿಕ್ಕಿ; ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ: KSRTC ಬಸ್ ಡಿಕ್ಕಿ; ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಕಾರವಾರ: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಬಾಳೆಗುಳಿ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ತಮಿಳುನಾಡು ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರುಣ್ ಪಾಂಡ್ಯನ್, ನಿಪುಲ್, ಮೊಹಮ್ಮದ್ ಹಾಗೂ ಶೇಖರನ್ ಮೃತಪಟ್ಟವರು. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸ ವರ್ಷದ ಪಾರ್ಟಿಗೆ ಅವರು ಗೋವಾ ಪ್ರವಾಸಕ್ಕೆ ಹೋಗಿ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಅಂಕೋಲಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...