ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತಿದೆ.
ಈಗಾಗಲೇ ಮೂರು ಕಂತಿನ ಆಧಾರದ ಮೇಲೆ ಎರಡು ಸಾವಿರ ರೂಪಾಯಿಗಳಂತೆ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಈವರೆಗೆ ಬಹುತೇಕ 80%ಕ್ಕಿಂತ ಹೆಚ್ಚು ಮಹಿಳೆಯರ ಖಾತೆಗೆ ಹಣ ವರ್ಗಾವಣೆಆಗಿದೆ.
ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಡಿಸೆಂಬರ್ 15 ರಿಂದ 20ನೇ ತಾರೀಕಿನ ಒಳಗೆ ಬಿಡುಗಡೆ ಆಗುವ ಸಾಧ್ಯತೆ ಇದೆ, ಒಂದು ವೇಳೆ ನಿಮ್ಮ ಖಾತೆಗೆ ಹಣ ಜಮಾ ಆಗಿದ್ದು ಸಂದೇಶ ನಿಮ್ಮ ಮೊಬೈಲಿಗೆ ಬಾರದೆ ಇದ್ದರೆ ನೇರವಾಗಿ ಬ್ಯಾಂಕಿಗೆ ಹೋಗಿ ಖಾತೆಯನ್ನು ಪರಿಶೀಲಿಸಿಕೊಳ್ಳಿ.ಕೆಲವರಿಗೆ ಈವರೆಗೂ ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಖಾತೆಗೆ ಜಮಾ ಆಗಿಲ್ಲ. ಹೀಗಾಗಿ ಖಾತೆಗೆ ಜಮಾ ಆಗದವರು ರೇಷನ್ ಕಾರ್ಡ್ ನಲ್ಲಿರುವ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಆಹಾರ ಇಲಾಖೆ ಸೂಚನೆ ನೀಡಿದೆ.
ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿಯೂ ಈಗಾಗಲೇ 4 ಕಂತಿನ ಹಣ ಬಿಡುಗಡೆ ಮಾಡಿದೆ. ಡಿಸೆಂಬರ್ ತಿಂಗಳಿನ ಹಣವನ್ನು ಡಿಸೆಂಬರ್ 15ನೇ ತಾರೀಖಿನ ಒಳಗೆ ಬಿಡುಗಡೆ ಮಾಡುವುದಾಗಿ ಸರ್ಕಾರ ತಿಳಿಸಿದೆ.