Anna Bhagya Scheme : 3 ತಿಂಗಳವರೆಗೆ ಅಕ್ಕಿ ಬದಲು ಹಣ ನೀಡುತ್ತೇವೆ : ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

ಕೊರಟಗೆರೆ : ಅನ್ನಭಾಗ್ಯ ಯೋಜನೆಯಡಿ ಮೂರು ತಿಂಗಳವರೆಗೆ ಅಕ್ಕಿ ಬದಲು ಹಣ ನೀಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ‘ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ. ಹೀಗಾಗಿ ರಾಜ್ಯ ಸರ್ಕಾರ ತಾತ್ಕಾಲಿಕ ವ್ಯವಸ್ಥೆಯಾಗಿ ಅಕ್ಕಿ ಬದಲು ಹಣ ನೀಡಲು ನಿರ್ಧಾರ ತೆಗೆದುಕೊಂಡಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಮೊದಲು ಅಕ್ಕಿಯ ಬದಲಿಗೆ ಹಣ ನೀಡಿ ಎಂದು ಬಿಜೆಪಿಯವರೇ ಹೇಳಿದ್ದು, ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಹಣ ನೀಡುತ್ತೇವೆ ಎಂದರೆ ಅದನ್ನೂ ಟೀಕೆ ಮಾಡುತ್ತಾರೆ. ಬಿಜೆಪಿಯವರಿಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಬಡವರ ಹಸಿವಿನ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು. ಕೆಲವರು ರಾಜಕೀಯ ಕಾರಣಕ್ಕಾಗಿಯೇ ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದರು.

5 ಕೆಜಿ ಅಕ್ಕಿ ಬದಲು ಹಣ ನೀಡಲು ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ . ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ. ಜುಲೈ 1 ರಿಂದಲೇ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಜಮಾ ಮಾಡಲಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read