ಬೆಳಗಾವಿ : ಅನ್ನಭಾಗ್ಯ ಯೋಜನೆಯಡಿ ಈ ತಿಂಗಳು ಯಾರಿಗೂ ‘ಅನ್ನಭಾಗ್ಯ’ ಹಣ ಸಿಗಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೊಸ ಟ್ವಿಸ್ಟ್ ನೀಡಿದ್ದಾರೆ.
ಚಿಕ್ಕೋಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ ಈ ತಿಂಗಳ ಹಣ ಮುಂದಿನ ತಿಂಗಳು ಕೊಡಲಾಗುತ್ತದೆ, ಈ ತಿಂಗಳು ಯಾರಿಗೂ ‘ಅನ್ನಭಾಗ್ಯ’ ಹಣ ಸಿಗಲ್ಲ ಎಂದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೊಸ ಟ್ವಿಸ್ಟ್ ನೀಡಿದ್ದಾರೆ. ಜೂನ್ ತಿಂಗಳಿನದ್ದು ಜುಲೈಗೆ, ಜುಲೈ ತಿಂಗಳಿನದ್ದು ಆಗಸ್ಟ್ ಗೆ ಹಾಗೆ ಕೊಡಲಾಗುತ್ತದೆ ಎಂದು ಹೇಳಿದ್ದಾರೆ. ಜುಲೈ 10 ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಈ ಬೆನ್ನಲ್ಲೇ ಅನ್ನಭಾಗ್ಯ ಯೋಜನೆಗೆ ಸಚಿವ ಸತೀಶ್ ಜಾರಕಿಹೊಳಿ ಹೊಸ ಟ್ವಿಸ್ಟ್ ನೀಡಿದ್ದಾರೆ
ಜುಲೈ 10 ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಆರಂಭ
ಬೆಂಗಳೂರು: ಜುಲೈ 10 ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಯಡಿ 5ಕೆಜಿ ಹೆಚ್ಚುವರಿ ಅಕ್ಕಿ ಬದಲಾಗಿ ಹಣ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಇಂದಿನಿಂದಲೇ ಹಣ ನೀಡುವ ಪ್ರಕ್ರಿಯೆ ಆರಂಭ ಎಂದು ಹೇಳಿದ್ದರೆ, ಸಿಎಂ ಸಿದ್ದರಾಮಯ್ಯ ಜುಲೈ 10ರಿಂದ ಕೊಡುತ್ತೇವೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ, ಜುಲೈ 1ರಿಂದಲೇ ಹಣ ಕೊಡುತ್ತೇವೆ ಎಂದು ಹೇಳಿಲ್ಲ, ಜುಲೈ 10ರಿಂದ ಹಣ ಕೊಡುವ ಪ್ರಕ್ರಿಯೆ ಆರಂಭವಾಗುತ್ತದೆ ಎಂದರು1 ಕೋಟಿ 28 ಲಕ್ಷ ಕಾರ್ಡ್ ಗಳ ಪೈಕಿ 99.99% ಆಧಾರ್ ಸೀಡಿಂಗ್ ಆಗಿದೆ. 1 ಕೋಟಿ 22 ಲಕ್ಷ ಕಾರ್ಡ್ ಗಳಿಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್ ಗಳು ಆಧಾರ್ ಲಿಂಕ್ ಆಗಬೇಕು. ಹಾಗಾಗಿ ಜುಲೈ ತಿಂಗಳಲ್ಲೇ ಹಣ ಹಾಕುತ್ತೇವೆ. 10ರಿಂದ ಆರಂಭವಾಗಬಹುದು ಎಂದು ಹೇಳಿದರು.