ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿಗೆ ಹಣ ನೀಡುತ್ತೇವೆ, ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. ಹೆಚ್ಚುವರಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ ಎಂದರು.
5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ. ಜುಲೈ 1 ರಿಂದಲೇ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಜಮಾ ಮಾಡಲಾಗುತ್ತದೆ.
3 ತಿಂಗಳವರೆಗೆ ಅಕ್ಕಿ ಬದಲು ಹಣ ನೀಡುತ್ತೇವೆ : ಗೃಹ ಸಚಿವ ಜಿ. ಪರಮೇಶ್ವರ್
ಅನ್ನಭಾಗ್ಯ ಯೋಜನೆಯಡಿ ಮೂರು ತಿಂಗಳವರೆಗೆ ಅಕ್ಕಿ ಬದಲು ಹಣ ನೀಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ‘ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ. ಹೀಗಾಗಿ ರಾಜ್ಯ ಸರ್ಕಾರ ತಾತ್ಕಾಲಿಕ ವ್ಯವಸ್ಥೆಯಾಗಿ ಅಕ್ಕಿ ಬದಲು ಹಣ ನೀಡಲು ನಿರ್ಧಾರ ತೆಗೆದುಕೊಂಡಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಮೊದಲು ಅಕ್ಕಿಯ ಬದಲಿಗೆ ಹಣ ನೀಡಿ ಎಂದು ಬಿಜೆಪಿಯವರೇ ಹೇಳಿದ್ದು, ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಹಣ ನೀಡುತ್ತೇವೆ ಎಂದರೆ ಅದನ್ನೂ ಟೀಕೆ ಮಾಡುತ್ತಾರೆ. ಬಿಜೆಪಿಯವರಿಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಬಡವರ ಹಸಿವಿನ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು. ಕೆಲವರು ರಾಜಕೀಯ ಕಾರಣಕ್ಕಾಗಿಯೇ ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದರು.
5 ಕೆಜಿ ಅಕ್ಕಿ ಬದಲು ಹಣ ನೀಡಲು ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ . ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ. ಜುಲೈ 1 ರಿಂದಲೇ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಜಮಾ ಮಾಡಲಾಗುತ್ತದೆ.