
ಪುಣೆ: ಖ್ಯಾತ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರನ್ನು ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆ ನೋವಿನ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
ಚಿಕಿತ್ಸೆ ಪಡೆಯುತ್ತಿರುವ ಅಣ್ಣಾ ಹಜಾರೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಧೂತ ಬೋಡಮ್ವಾಡ್ ತಿಳಿಸಿದ್ದಾರೆ.