ಮುಂಬೈ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಘೋಷಿಸಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕೆಲವೇ ಗಂಟೆಯಲ್ಲಿ ತಮ್ಮ ನಿರ್ಧಾರ ಬದಲಿಸಿದ್ದಾರೆ.
ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಶನಿವಾರದಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅವರು ಹೇಳಿದ್ದರು. ಮಹಾರಾಷ್ಟ್ರದ ರಾಲೇಗಾಂವ್ ಸಿದ್ಧಿಯಲ್ಲಿ ಸತ್ಯಾಗ್ರಹ ನಡೆಸುವ ಮೂಲಕ ರೈತರ ಹೋರಾಟ ಬೆಂಬಲಿಸುವುದಾಗಿ ಅವರು ತಿಳಿಸಿದ್ದರು.
ಆದರೆ, ಮಹಾರಾಷ್ಟ್ರ ಬಿಜೆಪಿ ನಾಯಕರು ಅವರನ್ನು ಭೇಟಿ ಭೇಟಿಯಾದ ನಂತರ ನಿರ್ಧಾರ ಬದಲಿಸಿದ್ದಾರೆ. ಕೇಂದ್ರ ಸರ್ಕಾರ ತಮ್ಮ ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದೆ. ಹೀಗಾಗಿ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿದಿರುವುದಾಗಿ ಅಣ್ಣಾ ಹಜಾರೆ ತಿಳಿಸಿದ್ದಾರೆ.
ಜನವರಿ 30 ರಿಂದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದ ಅಣ್ಣಾ ಹಜಾರೆ ಶುಕ್ರವಾರ ಸಂಜೆ ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಕೃಷಿ ರಾಜ್ಯ ಸಚಿವ ಕೈಲಾಶ್ ಚೌಧರಿ ಅವರನ್ನು ಭೇಟಿಯಾದ ನಂತರ ತಮ್ಮ ಹೋರಾಟ ರದ್ದು ಪಡಿಸಿದ್ದಾರೆ.