alex Certify BIG NEWS: ಸೂಪರ್ ಮಾರ್ಕೆಟ್, ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ, ಸರ್ಕಾರದ ಕ್ರಮ ವಿರೋಧಿಸಿ ಅಣ್ಣಾ ಹಜಾರೆ ಸತ್ಯಾಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೂಪರ್ ಮಾರ್ಕೆಟ್, ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ, ಸರ್ಕಾರದ ಕ್ರಮ ವಿರೋಧಿಸಿ ಅಣ್ಣಾ ಹಜಾರೆ ಸತ್ಯಾಗ್ರಹ

ಪುಣೆ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಫೆಬ್ರವರಿ 14 ರಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಕೈಗೊಂಡಿದ್ದಾರೆ.

ಸೂಪರ್ ರ್ಮಾರ್ಕೆಟ್, ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಮಹಾರಾಷ್ಟ್ರ ಸರ್ಕಾರ ಅವಕಾಶ ನೀಡಿದ್ದು, ರಾಜ್ಯ ಸರ್ಕಾರದ ನಿರ್ಧಾರ ಕಂಡಿಸಿ ಅಣ್ಣಾ ಹಜಾರೆ ಹೋರಾಟ ಕೈಗೊಂಡಿದ್ದಾರೆ. ಅಂಗಡಿ, ಸೂಪರ್ ಮಾರ್ಕೆಟ್ ಗಳಲ್ಲಿ ವೈನ್ ಮಾರಾಟಕ್ಕೆ ನೀಡಿರುವ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಸತ್ಯಾಗ್ರಹ ನಡೆಸಲಿದ್ದಾರೆ.

ಸೂಪರ್ ಮಾರ್ಕೆಟ್ ಮತ್ತು ದಿನಸಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಿರುವ ಮಹಾರಾಷ್ಟ್ರ ಸರ್ಕಾರದ ವೈನ್ ನೀತಿಯನ್ನು ವಿರೋಧಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ.

ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಎರಡು ಪತ್ರಗಳನ್ನು ಬರೆದಿದ್ದೇನೆ. ಆದರೆ ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಫೆಬ್ರವರಿ 14 ರಂದು ಅಹ್ಮದ್‌ ನಗರ ಜಿಲ್ಲೆಯ ರಾಲೆಗಾಂವ್ ಸಿದ್ಧಿ ಗ್ರಾಮದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸುವುದಾಗಿ 84 ವರ್ಷ ವಯಸ್ಸಿನ ಅಣ್ಣಾ ಹಜಾರೆ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...