
ಬೆಂಗಳೂರು: ನ್ಯಾಯ ಬೆಲೆ ಅಂಗಡಿಗಳಿಗೆ ಹೋಗಲು ಸಾಧ್ಯವಾಗದ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಪಡಿತರ ಆಹಾರ ಧಾನ್ಯ ಪೂರೈಕೆ ಮಾಡಲಾಗುವುದು.
80 ವರ್ಷ ದಾಟಿದ ಹಿರಿಯರ ಮನೆ ಬಾಗಿಲಿಗೆ ಆಹಾರ ತಲುಪಿಸುವ ಅನ್ನ ಸುವಿಧಾ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದ 80 ವರ್ಷ ಮೇಲ್ಪಟ್ಟ ವೃದ್ಧರು, ವೃದ್ಧೆಯರ ಪಾಲಿನ ಆಹಾರ ಪದಾರ್ಥಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗುವುದು. ರಾಜ್ಯದ ಅಂದಾಜು 80,000 ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗುತ್ತದೆ, ಸಾಮಾಜಿಕ ಭದ್ರತಾ ಕಳಕಳಿಯೊಂದಿಗೆ ಇದನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.