ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ.
ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ( Anna Bhagya Scheme ) ರಾಷ್ಟ್ರೀಯ ಭದ್ರತಾ ಕಾಯ್ದೆ ಅನ್ವಯ ಈಗಾಗಲೇ ಕೊಡಲಾಗುತ್ತಿದ್ದಂತ 5 ಕೆಜಿ ಅಕ್ಕಿಯ ಜೊತೆಗೆ, ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುತ್ತಿದೆ. ಹೆಚ್ಚುವರಿ 5 ಕೆಜೆ ಅಕ್ಕಿ ಬದಲಾಗಿ ಪ್ರತಿ ಕೆಜಿಗೆ ರೂ.34ರಂತೆ ಐದು ಕೆಜಿಗೆ ರೂ.170ಗಳನ್ನು ಕುಟುಂಬದ ಪ್ರತಿ ಸದಸ್ಯನಿಗೆ ನೀಡುತ್ತಿದೆ.
ಅನ್ನಭಾಗ್ಯ ಯೋಜನೆಯಡಿ ಈಗಾಗಲೇ ರೇಷನ್ ಕಾರ್ಡ್ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಆದರೆ ಇನ್ನೂ ಕೆಲವರಿಗೆ ಹಣ ಜಮಾ ಆಗಿಲ್ಲ. ಹೀಗಾಗಿ ಫಲಾನುಭವಿಗಳಿಗೆ ತಪ್ಪದೇ ಈ ಕೆಲಸಗಳನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.
ಬ್ಯಾಂಕ್ ಖಾತೆ ಸರಿಯಿಲ್ಲದಿದ್ದರೆ ಹೊಸದಾಗಿ ಅಂಚೆ ಕಚೇರಿಯಲ್ಲಿ (ಪೋಸ್ಟ್ ಆಫೀಸ್) ಹೊಸ ಐ.ಬಿ.ಪಿ.ಬಿ ಖಾತೆ ತೆರೆಯಬೇಕು. ಮೇಲ್ಕಂಡ ಎಲ್ಲಾ ಅಂಶಗಳು ಸರಿಯಾಗಿದ್ದಲ್ಲಿ ತಮ್ಮ ಖಾತೆಗೆ ಹಣ ಜಮೆಯಾಗಲಿದೆ. ಅರ್ಹರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.
ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರು ಮತ್ತು ಅವರ ಆಧಾರ್ ಕಾರ್ಡ್ನಲ್ಲಿ ಹೆಸರು ಸರಿಯಾಗಿದೆಯೇ ಪರೀಕ್ಷಿಸಿಕೊಳ್ಳಿ. ಇಲ್ಲವಾದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಿ. ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗಿದೆಯಾ ಅಂತ ಚೆಕ್ ಮಾಡಿಕೊಳ್ಳಿ ಇವೆಲ್ಲಾ ಸರಿಯಾಗಿದ್ದರೆ ನಿಮ್ಮ ಖಾತೆಗೆ ಹಣ ಬರುತ್ತದೆ.