alex Certify ಗಮನಿಸಿ : ‘ಅನ್ನಭಾಗ್ಯ’ ಯೋಜನೆಯ ಅಕ್ಟೋಬರ್ ತಿಂಗಳ ಹಣ ಜಮಾ : ಜಸ್ಟ್ ಈ ರೀತಿ ಚೆಕ್ ಮಾಡ್ಕೊಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘ಅನ್ನಭಾಗ್ಯ’ ಯೋಜನೆಯ ಅಕ್ಟೋಬರ್ ತಿಂಗಳ ಹಣ ಜಮಾ : ಜಸ್ಟ್ ಈ ರೀತಿ ಚೆಕ್ ಮಾಡ್ಕೊಳ್ಳಿ

ಬೆಂಗಳೂರು : ‘ ಅನ್ನಭಾಗ್ಯ’ ಯೋಜನೆಯ ಅಕ್ಟೋಬರ್ ತಿಂಗಳ ಹಣ ಜಮಾ ಆಗಿದ್ದು, ಕೆಲವರ ಖಾತೆಗೆ ಹಣ ಜಮಾ ಆಗಿಲ್ಲ.

ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಣ ಬಾರದೇ ಇರುವವರಿಗೆ ಸರಿಯಾದ ಮಾಹಿತಿ ಸಲ್ಲಿಸಿದ್ರೆ ಅವರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದ್ರೆ, ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಹಣ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ . ನವೆಂಬರ್ 20 ರ ಒಳಗೆ ಸಂಪೂರ್ಣವಾಗಿ ಎಲ್ಲಾ ಫಲಾನುಭವಿಗಳಿಗೂ ಅಕ್ಟೋಬರ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ವರ್ಗಾವಣೆ ಯಾಗುವುದು ಎಂದು ಸರ್ಕಾರ ತಿಳಿಸಿದೆ.
ನೀವು ಅನ್ನಭಾಗ್ಯ ಯೋಜನೆಗೆ ಅರ್ಹರಾಗಿದ್ದು ನಿಮಗೆ ಅಕ್ಟೋಬರ್ ತಿಂಗಳ ಹಣ ಬರಲಿದೆಯೇ ಎನ್ನುವುದನ್ನು ಚೆಕ್ ಮಾಡಲು ಈ ವಿಧಾನಗಳನ್ನು ಅನುಸರಿಸಿ.

ಚೆಕ್ ಮಾಡುವುದು ಹೇಗೆ..?

1) ಆಹಾರ ಇಲಾಖೆಯ ವೆಬ್ ಸೈಟ್ ಗೆ https://ahara.kar.nic.in/Home/EServices ಲಾಗಿನ್ ಆಗಬೇಕು
2) ಇದರಲ್ಲಿ ಸ್ಟೇಟಸ್ ಆಫ್ ಡಿಬಿಟಿ ಅನ್ನುವ ಆಯ್ಕೆ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಿ.
3) ನಂತರ ನಿಗದಿತ ಕಾಲಂ ನಲ್ಲಿ ರೇಷನ್ ಕಾರ್ಡ್ ನ ನಂಬರ್ ಕೇಳುತ್ತದೆ, ಅಂದ್ರೆ ಆರ್ ಸಿ ನಂಬರ್ನ್ನು ನಮೂದಿಸಿ
4) ನಂತರ ನಿಮ್ಮ ರೇಷನ್ ಕಾರ್ಡ್ ನ ಮೇಲ್ಬಾಗದಲ್ಲಿ ಕಾಣುವ ಆರ್ ಸಿ ನಂಬರ್ ಅನ್ನು ಇಲ್ಲಿ ನಮೂದಿಸಿ ಮುಂದುವರೆಯಿರಿ ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಿ.
5) ಮುಂದಿನ ಪುಟದಲ್ಲಿ ನಿಮ್ಮ ಅಕೌಂಟ್ಗೆ ಹಣ ಜಮಾ ಆಗಿದ್ಯಾ, ಒಂದೊಮ್ಮೆ ಖಾತೆಗೆ ಹಣ ಬರದಿದ್ದಲ್ಲಿ ಅದು ಯಾವ ಕಾರಣಕ್ಕೆ ಕ್ರೆಡಿಟ್ ಆಗಿಲ್ಲ ಎಂಬ ಮಾಹಿತಿ ನಿಮಗೆ ಸಿಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...