
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಅಕ್ಟೋಬರ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಹಣದ ಬದಲು 10 ಕೆ.ಜಿ. ಅಕ್ಕಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಹೆಚ್. ಮುನಿಯಪ್ಪ, ಅನ್ನಭಾಗ್ಯ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ 10 ಕೆಜಿ ಅಕ್ಕಿ ನೀಡಲಾಗುವುದು. ಅಕ್ಕಿ ಖರೀದಿ ಸಂಬಂಧ ಟೆಂಡರ್ ಪ್ರಕ್ರಿಯೆ ಮಾತುಕತೆ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಅಕ್ಕಿ ಕೊರತೆ ಹಿನ್ನೆಲೆಯಲ್ಲಿ 5 ಕೆಜಿ ಅಕ್ಕಿ ಬದಲಾಗಿ ಪ್ರತಿಯೊಬ್ಬರಿಗೆ ಪ್ರತಿ ತಿಂಗಳು 170 ರೂ. ಹಣ ವಿತರಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ಹಣವನ್ನು ಸಂದಾಯ ಮಾಡಲಾಗಿತ್ತು.