ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಯಾದ ಅನ್ನಭಾಗ್ಯ ಯೋಜನೆ ಹಳ್ಳ ಹಿಡಿಯುತ್ತಿದೆ ಎಂದು ರೇಷನ್ ವಿತರಕ ಸಂಘದ ಅಧ್ಯಕ್ಷ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನ್ನಭಾಗ್ಯ ಯೋಜನೆಯಲ್ಲಿ 10ಕೆಜಿ ಅಕ್ಕಿ ಕೊಡುತ್ತೇವೆ ಎಂದರು. ಅಕ್ಕಿ ಕೊರತೆಯಿಂದಾಗಿ 5 ಕೆಜಿ ಅಕ್ಕಿ ಉಳಿದ ಐದು ಕೆಜಿ ಅಕ್ಕಿಗಾಗಿ ಹಣ ನೀಡುವುದಾಗಿ ಹೇಳಿದರು. ಆದರೆ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಡಿಬಿಟಿ ಹಣ ತಲುಪುತ್ತಿಲ್ಲ. ನೇರವಾಗಿ ಅಕ್ಕಿಯನ್ನೇ ನಮಗೆ ಪೂರೈಸಬೇಕು. ರಾಜಕೀಯ ಕಾರಣಗಳಿಗಾಗಿ ಡಿಬಿಟಿ ಮುಂದುವರೆಸುವುದು ಬೇಡ ಎಂದು ಆಗ್ರಹಿಸಿದ್ದಾರೆ.
ಅನ್ನಭಾಗ್ಯ ಯೋಜನೆ ಅಕ್ಕಿ ನೀಡುವಂತೆ ಆಗ್ರಹಿಸಿ ಇಂದು ಎಲ್ಲಾ ರೇಶನ್ ನ್ಯಾಯಬೆಲೆ ಅಂಗಡಿ ಮುಚ್ಚಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.