ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ಬದಲಿಗೆ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ.
ಜುಲೈ 10 ರಿಂದ ಇದುವರೆಗೆ 97.27 ಲಕ್ಷ ಕಾರ್ಡ್ ದಾರರಲ್ಲಿ 3.45 ಕೋಟಿ ಫಲಾನುಭವಿಗಳಿಗೆ 566.05 ಕೋಟಿ ರೂ. ಗೂ ಅಧಿಕ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಅನ್ನಭಾಗ್ಯ ಯೋಜನೆ ಅಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ನೀಡಲಾಗುತ್ತಿದ್ದು, 5 ಕೆಜಿ ಹೆಚ್ಚುವರಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ ಹಣ ಪಾವತಿಸಲಾಗುತ್ತಿದೆ. ಜುಲೈ 17ರವರೆಗೆ ರಾಜ್ಯಾದ್ಯಂತ 3.45 ಕೋಟಿ ಫಲಾನುಭವಿಗಳಿಗೆ 566.05 ಕೋಟಿ ರೂಪಾಯಿಗೂ ಅಧಿಕ ಹಣ ಪಾವತಿಸಲಾಗಿದೆ.