ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ‘ಕರ್ನಾಟಕ ಸಿಂಗಂ’ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅರವಕುರಿಚಿ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಇಂದು ನಾಮಪತ್ರ ಸಲ್ಲಿಸಲು ಅವರು ಸೈಕಲ್ ನಲ್ಲಿ ತೆರಳಿದ್ದು ವಿಶೇಷವಾಗಿತ್ತು. ಪಕ್ಷದ ಮುಖಂಡರು ಹಾಗೂ ತಮ್ಮ ಬೆಂಬಲಿಗರೊಂದಿಗೆ ಅಣ್ಣಾಮಲೈ ಸೈಕಲ್ ನಲ್ಲಿ ತೆರಳಿದ್ದು, ಅವರಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಮುನಿರತ್ನ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.
ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ ತಮಿಳುನಾಡು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಈ ವಿಧಾನಸಭೆ ಚುನಾವಣೆಯಲ್ಲಿ ಅರವಕುರಿಚಿ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.