alex Certify BIG NEWS: ನಾಮಪತ್ರ ಸಲ್ಲಿಸುವಾಗಲೇ ಮನಗೆದ್ದ ‘ಕರ್ನಾಟಕ ಸಿಂಗಂ’ ಅಣ್ಣಾಮಲೈ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಮಪತ್ರ ಸಲ್ಲಿಸುವಾಗಲೇ ಮನಗೆದ್ದ ‘ಕರ್ನಾಟಕ ಸಿಂಗಂ’ ಅಣ್ಣಾಮಲೈ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ‘ಕರ್ನಾಟಕ ಸಿಂಗಂ’ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅರವಕುರಿಚಿ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಇಂದು ನಾಮಪತ್ರ ಸಲ್ಲಿಸಲು ಅವರು ಸೈಕಲ್ ನಲ್ಲಿ ತೆರಳಿದ್ದು ವಿಶೇಷವಾಗಿತ್ತು. ಪಕ್ಷದ ಮುಖಂಡರು ಹಾಗೂ ತಮ್ಮ ಬೆಂಬಲಿಗರೊಂದಿಗೆ ಅಣ್ಣಾಮಲೈ ಸೈಕಲ್ ನಲ್ಲಿ ತೆರಳಿದ್ದು, ಅವರಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಮುನಿರತ್ನ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.

ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ ತಮಿಳುನಾಡು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಈ ವಿಧಾನಸಭೆ ಚುನಾವಣೆಯಲ್ಲಿ ಅರವಕುರಿಚಿ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...