alex Certify ತುಮಕೂರು, ವಿಜಯಪುರ, ಕೋಲಾರ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆ: 24,954 ಉದ್ಯೋಗ ಸೃಷ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಮಕೂರು, ವಿಜಯಪುರ, ಕೋಲಾರ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆ: 24,954 ಉದ್ಯೋಗ ಸೃಷ್ಟಿ

ಬೆಂಗಳೂರು: ಏಕಗವಾಕ್ಷಿ ಅನುಮೋದನಾ ಸಮಿತಿ ಮತ್ತೊಂದು ಸಾಧನೆ ಮಾಡಿದ್ದು, 3,500.86 ಕೋಟಿ ರೂ. ಬಂಡವಾಳ ಹೂಡಿಕೆಯ 69 ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದರಿಂದ 24,954 ಉದ್ಯೋಗಗಳ ಸೃಷ್ಟಿಯಾಗಲಿದೆ.

ತುಮಕೂರು, ವಿಜಯಪುರ, ರಾಮನಗರ, ಕೋಲಾರ, ಬೆಳಗಾವಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಹೊಸ ಕೈಗಾರಿಕೆಗಳು ಅಸ್ತಿತ್ವಕ್ಕೆ ಬರಲಿವೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ವಿವರ:

ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್-KSDL 250 ಕೋಟಿ ರೂ. ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು(SLSWCC) 69 ಯೋಜನೆಗಳ ಒಟ್ಟು 3,500.86 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆಯ ಪ್ರಸ್ತಾವಗಳಿಗೆ ಅನುಮೋದನೆ ನೀಡಿದೆ.

ಎಂ.ಬಿ. ಪಾಟೀಲ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ಏಕಗವಾಕ್ಷಿ ಅನುಮೋದನಾ ಸಮಿತಿಯ 152ನೇ  ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ರಾಜ್ಯದಲ್ಲಿ 24,954 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

ತುಮಕೂರು, ವಿಜಯಪುರ, ರಾಮನಗರ, ಕೋಲಾರ, ಬೆಳಗಾವಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಹೊಸ ಕೈಗಾರಿಕೆಗಳು ಅಸ್ತಿತ್ವಕ್ಕೆ ಬರಲಿವೆ.

ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಕೈಗಾರಿಕೆಗಳಲ್ಲಿ ಮಷಿನ್ ಟೂಲ್, ತಂಪು ಪಾನೀಯ, ಕಾರ್ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್, ಕಬ್ಬಿಣ ಮತ್ತು ಉಕ್ಕು, ಪರಿಶುದ್ಧ ಜಲಜನಕ  ಅನಿಲ, ಹಾಲಿನ ಪುಡಿ ತಯಾರಿಕೆ ಘಟಕಗಳು ಇರಲಿವೆ.

50 ಕೋಟಿ ರೂ.ಗೂ ಹೆಚ್ಚು ಬಂಡವಾಳ ಹೂಡಿಕೆಯ 12 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ನೀಡಿರುವ ಅನುಮೋದನೆಗಳಿಂದ 2311.88 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 18,972 ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ. 15 ಕೋಟಿಯಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 55 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 1148.98 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 5,832 ಜನರಿಗೆ ಉದ್ಯೋಗ ಅವಕಾಶಗಳು ಲಭ್ಯವಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 2 ಯೋಜನೆಗೆ ನೀಡಿರುವ ಅನುಮೋದನೆಯಿಂದ 40 ಕೋಟಿ ರೂ.ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 150 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿವೆ.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತ ಗುಂಜನ್ ಕೃಷ್ಣ,, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಡಾ. ಎನ್. ಮಹೇಶ್, ಐಟಿಬಿಟಿ ಇಲಾಖೆಯ ನಿರ್ದೇಶಕ ರಾಹುಲ್ ಎಸ್. ಸಂಕನೂರ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...