ಹುಬ್ಬಳ್ಳಿ : ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ 4 ಕ್ಕೇರಿಕೆಯಾಗಿದೆ.
ಹುಬ್ಬಳ್ಳಿಯ ಉಣಕಲ್ ಅಯ್ಯಪ್ಪ ದೇವಾಸ್ಥಾನದ ಬಳಿ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ನಿಂಗಪ್ಪ ಬೇಪಾರಿ ಹಾಗೂ ಸಂಜಯ ಸವದತ್ತಿ ಎಂಬ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದರು. ಇದೀಗ ಮತ್ತೋರ್ವ ಮಾಲಾಧಾರಿ ಕೂಡ ಚಿಕಿತ್ಸೆ ಫಲಿಸದೇ ಕೊನೆ ಉಸಿರೆಳೆದಿದ್ದಾರೆ.ಈ ಮೂಲಕ ಸಾವಿನ ಸಂಖ್ಯೆ 3 ಕ್ಕೇರಿಕೆಯಾಗಿದೆ.
ಹುಬ್ಬಳ್ಳಿಯ ಉಣಕಲ್ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮೃತಪಟ್ಟ ಇಬ್ಬರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು.