alex Certify ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ʻಬಂಪರ್ʼ ಅವಕಾಶ : ಜನವರಿ 9 ರಂದು ರಾಜ್ಯದಾದ್ಯಂತ ʻರಾಷ್ಟ್ರೀಯ ಲೋಕ್ ಅದಾಲತ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ʻಬಂಪರ್ʼ ಅವಕಾಶ : ಜನವರಿ 9 ರಂದು ರಾಜ್ಯದಾದ್ಯಂತ ʻರಾಷ್ಟ್ರೀಯ ಲೋಕ್ ಅದಾಲತ್’

ಬೆಂಗಳೂರು : ರಾಜಿ ಸಂಧಾನದ ಮೂಲಕ ಬಾಕಿ ಇರುವ ವಿವಿಧ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಬಂಪರ್ ಅವಕಾಶವೊಂದು ಸಿಗುತ್ತಿದೆ. ಜನವರಿ 9 ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಇದರ ಸದುಪಯೋಗ ಪಡೆಯಬಹುದಾಗಿದೆ.

ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್‍ಬೌನ್ಸ್, ರಾಜಿಯಾಗಬಹುದಾದ ಕ್ರಿಮಿನಲ್ ಹಾಗೂ ಇತರ ಪ್ರಕರಣಗಳನ್ನು ಗುರುತಿಸಲಾಗಿದೆ. ಸದರಿ ಪ್ರಕರಣಗಳ ಉಭಯ ಕಕ್ಷಿದಾರರನ್ನು ಕರೆಯಿಸಿ ಅವರ ಒಪ್ಪಿಗೆಯ ಪ್ರಕಾರ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು.

ಲೋಕ ಅದಾಲತ್‍ನಲ್ಲಿ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಛಕ್ತಿ, ಜಲಮಂಡಳಿ ಇನ್ನಿತರ ನ್ಯಾಯಾಲಯಕ್ಕೆ ಬರಬಹುದಾದ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಲಾಗುತ್ತದೆ. ಈ ಪ್ರಕರಣಗಳಲ್ಲಿ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ತೀರ್ಪು ನೀಡಲಾಗುವುದು. ಅಂತಹ ತೀರ್ಪುಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್ ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ, ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಸಮಯ ಉಳಿತಾಯವಾಗುತ್ತದೆ. ಶೀಘ್ರವಾಗಿ ನ್ಯಾಯ ಪಡೆಯಲು ಸಹ ಇದರಿಂದ ಸಾಧ್ಯವಾಗುತ್ತದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...