![](https://kannadadunia.com/wp-content/uploads/2019/12/Ananthkumar-Hegde.jpg)
ಕಾರವಾರ : ಸಿಎಂ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಟೀಕಿಸಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿದ್ರಾಮುಲ್ಲಾ ಖಾನ್ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದು ಮುಂಡಗೊಡದಲ್ಲಿ ಭಾಷಣ ಮಾಡಿದ್ದರು. ಇದೀಗ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಈಗಾಗಲೆ ಅಯೋಧ್ಯೆ ರಾಮಮಂದಿರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ವಿವಾದಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆ ಸಂಬಂಧ ಈಗಾಗಲೇ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಎಫ್ಐಆರ್ ದಾಖಲಾಗಿತ್ತು. ಇದೀಗ ಮುಂಡಗೋಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.