alex Certify ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ಜುಲೈ 13 ರಂದು ರಾಜ್ಯಾದ್ಯಂತ ‘ಲೋಕ ಅದಾಲತ್’.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ಜುಲೈ 13 ರಂದು ರಾಜ್ಯಾದ್ಯಂತ ‘ಲೋಕ ಅದಾಲತ್’.!

ಬೆಂಗಳೂರು : ಹೆಚ್ಚಿನ ಸಂಖ್ಯೆಯ ಬಾಕಿ ಇರುವ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಪರಿಹರಿಸುವ ಪ್ರಯತ್ನವಾಗಿ , ಜುಲೈ 13 ರಂದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಹಸಿಲ್ ನ್ಯಾಯಾಲಯಗಳು, ನ್ಯಾಯಮಂಡಳಿಗಳು ಮತ್ತು ಹೈಕೋರ್ಟ್ಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜಿಸಲಾಗಿದೆ .

ಜು.13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಕಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಾಗಿದೆ ಎಂದು ಬಳ್ಳಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ಹೇಳಿದರು.

ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು ಈ ಲೋಕ್ ಅದಾಲತ್ ಸಹಾಯವಾಗಲಿದೆ. ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಎಂದು ತಿಳಿಸಿದರು.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು.

ಪ್ರಕರಣಗಳಿಗೆ ಸಂಬಂದಪಟ್ಟ ವಕೀಲರು, ಕಕ್ಷಿದಾರರು ಜುಲೈ 13 ರಂದು ಜರುಗುವ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬೇಕು. ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಭೇಟಿ ನೀಡಬಹುದು ಎಂದು ಅವರು ತಿಳಿಸಿದರು.

ಜು.29 ರಿಂದ ಆ.03 ರ ವರೆಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ವಿಶೇಷ ಲೋಕ್ ಅದಾಲತ್ 

ಸರ್ವೋಚ್ಚ ನ್ಯಾಯಾಲಯವು ವಿಶೇಷ ಲೋಕ್ ಅದಾಲತ್ ಅನ್ನು ಜುಲೈ 29 ರಿಂದ ಆಗಸ್ಟ್ 03 ರ ವರೆಗೆ ನಡೆಸಲು ಉದ್ದೇಶಿಸಲಾಗಿದ್ದು, ಪಕ್ಷಕಾರರುಗಳಿಗೆ, ಎದುರುದಾರರ ಜೊತೆ ಪೂರ್ವಭಾವಿ ಲೋಕ್ ಅದಾಲತ್ ಅನ್ನು ನಡೆಸಲು ವಿಡಿಯೋ ಕಾನ್ಸರೆನ್ಸ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಗೆ ಸಂಬಂಧಿಸಿದ ವಿವಿಧ ಪ್ರಕರಣಗಳು ಸರ್ವೋಚ್ಛ ನ್ಯಾಯಾಲಯದಲ್ಲಿಯೂ ಇವೆ. ಇವುಗಳನ್ನು ಸಹ ಲೋಕ್ ಅದಾಲತ್ನಲ್ಲಿ ರಾಜಿಗೆ ಪರಿಗಣಿಸಲಾಗಿದೆ ಎಂದರು.

ತೆರಿಗೆ ಪಾವತಿ ಶೇ.5ರಷ್ಟು ವಿನಾಯತಿ:

ನಗರಸಭೆ ಹಾಗೂ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರು ತಮ್ಮ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಜುಲೈ 31 ರೊಳಗೆ ಪಾವತಿಸುವ ಮೂಲಕ ಶೇ 5 ರಷ್ಟು ವಿನಾಯತಿ ಪಡೆಯಬಹುದು ಎಂದು ಅವರು ಹೇಳಿದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...