ತೆಲಂಗಾಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಮೂವರು ವ್ಯಕ್ತಿಗಳು ರಾಜ್ಯದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದರು.ಫೆಬ್ರವರಿ 20 ರ ರಾತ್ರಿ ಬಾಲಕಿ ವಸತಿ ಸಂಕೀರ್ಣದಲ್ಲಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ.
ಅದೇ ಕಾಲೋನಿಯ ಮೂವರು ವ್ಯಕ್ತಿಗಳು ಅಪ್ರಾಪ್ತ ಬಾಲಕಿಯನ್ನು ಚಾಕೊಲೇಟ್ ನೀಡಿ ಹತ್ತಿರದ ಪೊದೆಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.ಬಾಲಕಿಯ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿದರು.
ಬಾಲಕಿಗೆ ತೀವ್ರ ರಕ್ತಸ್ರಾವವಾಗುತ್ತಿರುವುದು ಕಂಡುಬಂದು, ಜನರು ಅವರು ಆರೋಪಿಗಳಲ್ಲಿ ಒಬ್ಬನನ್ನು ಹಿಡಿದರು. ಉಳಿದ ಇಬ್ಬರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.