ತುಮಕೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತುಮಕೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ದಗಂಗಾ ಮಠದ ಜಾತ್ರೆಗೆ ತೆರಳಲು ಹೊರಟಿದ್ದ ಬಾಲಕಿಯನ್ನು ಅಪಹರಿಸಿ ಬಂಡೇಪಾಳ್ಯದ ಮನೆಯೊಂದರಲ್ಲಿ ಮೂವರು ಅತ್ಯಾಚಾರ ಎಸಗಿ ನಂತರ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎನ್ನಲಾಗಿದೆ.
ಸದ್ಯ ಮೂವರು ಆರೋಪಿಗಳನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತರನ್ನು ಅಮೋಘ್ (22) ಹನುಮಂತ (22) ಪ್ರತಾಪ್ (20) ಎಂದು ಗುರುತಿಸಲಾಗಿದೆ. ಬಾಲಕಿಯ ಹೇಳಿಕೆ ಆಧರಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.