ಬಳ್ಳಾರಿ: ಬಾಣಂತಿಯರ ಸರಣಿ ಸಾವಿನಿಂದ ಸಾಕಷ್ಟು ಸುದ್ದಿಯಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮತ್ತೊಬ್ಬ ಬಾಣಂತಿ ಮೃತಪಟ್ಟಿದ್ದಾರೆ.
ನವೆಂಬರ್ 10ರ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಸುಮಯ್ಯಾ(24) ಮೃತಪಟ್ಟವರು. ಕೂಡ್ಲಿಗಿ ಮೂಲದ ಇವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಿತ್ಯವೂ ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿತ್ತು. ಗುರುವಾರ ತೀವ್ರ ತೊಂದರೆಯಾದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ನವೆಂಬರ್ 10ರಂದು ಜಿಲ್ಲಾಸ್ಪತ್ರೆಯಲ್ಲಿ 7 ಗರ್ಭಿಣಿಯರಿಗೆ ಹೆರಿಗೆಯಾಗಿದ್ದು, ನಾಲ್ವರು ಬಾಣಂತಿಯರು ಮೃತಪಟ್ಟಿದ್ದರು. ಇದೀಗ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ. ನವೆಂಬರ್ 12ರಂದು ಲಲಿತಮ್ಮ, ನಂದಿ, ನವೆಂಬರ್ 20ರಂದು ರೋಜಾ, ನವೆಂಬರ್ 23 ರಂದು ಮುಸ್ಕಾನ್ ಮೃತಪಟ್ಟಿದ್ದರು.