ನವದೆಹಲಿ: ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು ಸಿಕ್ಕಿದ್ದು, ಗಲ್ಲುಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರಿಗೆ ರಿಲೀಫ್ ಸಿಕ್ಕಿದೆ. ಹೌದು. ಕತಾರ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಕತಾರ್ ನಲ್ಲಿ ಬೇಹುಗಾರಿಕೆ ಆರೋಪದಲ್ಲಿ ಜೈಲು ಶಿಕ್ಚೆಗೆ ಗುರಿಯಾಗಿದ್ದ 8 ಭಾರತೀಯರಿಗೆ ರಿಲೀಫ್ ಸಿಕ್ಕಿದೆ.8 ಮಂದಿ ಮಾಜಿ ಯೋಧರ ಪೈಕಿ 7 ಮಂದಿ ಕತಾರ್ ನಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ.
ಕತಾರ್ ನ್ಯಾಯಾಲಯವು ಸೋಮವಾರ ತನ್ನ ವಶದಲ್ಲಿದ್ದ ಎಲ್ಲಾ ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆ ತಿಳಿಸಿದೆ.
ಈ ಹಿಂದೆ ದೇಶದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಯನ್ನು ಬಿಡುಗಡೆ ಮಾಡುವ ಕತಾರ್ ನ್ಯಾಯಾಲಯದ ನಿರ್ಧಾರವನ್ನು ಎಂಇಎ ತನ್ನ ಅಧಿಕೃತ ಹೇಳಿಕೆಯಲ್ಲಿ ಸ್ವಾಗತಿಸಿದೆ.
ಕತಾರ್ನಲ್ಲಿ ಬಂಧನಕ್ಕೊಳಗಾದ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂಟು ಭಾರತೀಯ ಪ್ರಜೆಗಳ ಬಿಡುಗಡೆಯನ್ನು ಭಾರತ ಸರ್ಕಾರ ಸ್ವಾಗತಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಅವರಲ್ಲಿ ಎಂಟು ಮಂದಿಯಲ್ಲಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ. ಈ ಪ್ರಜೆಗಳ ಬಿಡುಗಡೆ ಮತ್ತು ಸ್ವದೇಶಕ್ಕೆ ಮರಳಲು ಅನುವು ಮಾಡಿಕೊಡುವ ಕತಾರ್ ರಾಜ್ಯದ ಅಮೀರ್ ಅವರ ನಿರ್ಧಾರವನ್ನು ನಾವು ಶ್ಲಾಘಿಸುತ್ತೇವೆ ಎಂದು ತಿಳಿಸಿದೆ.