alex Certify BREAKING : ಬೆಂಗಳೂರಿನ ಪಬ್ ನಲ್ಲಿ ಮತ್ತೊಂದು ಅಗ್ನಿ ಅವಘಡ : ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ಪಬ್ ನಲ್ಲಿ ಮತ್ತೊಂದು ಅಗ್ನಿ ಅವಘಡ : ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ವ್ಯಕ್ತಿ

ಬೆಂಗಳೂರು : ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ಬೆಂಗಳೂರಿನ ಪಬ್ ನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ.

ಕೋರಮಂಗಲದ   ತಾವರೆಕೆರೆ ಮುಖ್ಯ ರಸ್ತೆಯಲ್ಲಿರುವ ಪೋರಂ ಎದುರಿಗಿನ ಕಟ್ಟಡದಲ್ಲಿ ಬೆಂಕಿ ತಗುಲಿದೆ. ಧಗ ಧಗಿಸುತ್ತಿರುವ ಬೆಂಕಿ ಪಬ್ ಪಕ್ಕದ ಕಟ್ಟಡಕ್ಕೂ ಹರಡಿದೆ.  ಬೆಂಕಿ ಹರಡುತ್ತಿದ್ದಂತೆ ವ್ಯಕ್ತಿಯೊಬ್ಬ ಕಟ್ಟಡದಿಂದ ಜಿಗಿದಿದ್ದಾನೆ.  ಈ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ . ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ. ಸದ್ದಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...