ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಪಟಾಕಿ ಅವಘಡ ಸಂಭವಿಸಿದ್ದು, ಗುಜರಿ ಅಂಗಡಿ ಸುಟ್ಟು ಭಸ್ಮವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಪಟಾಕಿ ಕಿಡಿ ತಗುಲಿ ಇಡೀ ಗುಜರಿ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ.
ಮುಬರಾಕ್ ಎಂಬುವವರ ಗುಜರಿ ಅಂಗಡಿಗೆ ಬೆಂಕಿ ತಗುಲಿದ್ದು., ಘಟನೆಯಲ್ಲಿ ಸಾವಿರಾರು ರೂ ನಷ್ಟವಾಗಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.