ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಗ್ಯಾಸ್ ಗೀಸರ್ ದುರಂತ ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ 21 ವರ್ಷದ ಯುವತಿ ಮೃತಪಟ್ಟಿದ್ದಾರೆ.
ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದೆ. ಡಿ.20 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡಿ.20 ರಂದು ಸ್ನಾನ ಮಾಡಲು ಹೋದ ಯುವತಿ ರಾಜೇಶ್ವರಿ ಎಷ್ಟು ಹೊತ್ತಾದರೂ ಸ್ನಾನದ ಕೋಣೆಯಿಂದ ಹೊರಗೆ ಬರಲಿಲ್ಲ. ಇದರಿಂದ ಅನುಮಾನಗೊಂಡ ಪೋಷಕರು ಸ್ನಾನದ ಕೋಣೆಗೆ ಹೋಗಿ ನೋಡಿದಾಗ ಯುವತಿ ಗೀಸರ್ ಸೋರಿಕೆಯಿಂದ ಮೃತಪಟ್ಟಿರುವುದು ತಿಳಿದು ಬಂದಿದೆ.
ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಮೃತಪಟ್ಟು, 4 ವರ್ಷದ ಮಗು ಸ್ಥಿತಿ ಗಂಭೀರವಾದ ಘಟನೆ ಬೆಂಗಳೂರಿನ ಸದಾಶಿವನಗರದ ಅಶ್ವಥ್ ನಗರದಲ್ಲಿ ಇತ್ತೀಚೆಗೆ ನಡೆದಿತ್ತು. ರಮ್ಯಾ ಎಂಬ ಮಹಿಳೆ ತನ್ನ ಮಗುವಿಗೆ ಸ್ನಾನ ಮಾಡಿಸುವಾಗ ಗ್ಯಾಸ್ ಗೀಸರ್ ಸೋರಿಕೆಯಾಗಿತ್ತು. ಈ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿದೆ.