ಬೆಂಗಳೂರು : ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ ನಾಡಿನ ರೈತರ 4 ಲಕ್ಷ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಮೂಲಕ, ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ವಿವಿಧ ಎಸ್ಕಾಂಗಳಲ್ಲಿ ರೈತರು ಅಳವಡಿಕೆ ಮಾಡಿರುವ 4 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳನ್ನು ಸಕ್ರಮಗೊಳಿಸಲು ನಿರ್ಧರಿಸಲಾಗಿದೆ. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
2015ರಿಂದ ಈಚಿನ ಪಂಪ್ಸೆಟ್ ಗಳಿಗೆ ಅಕ್ರಮವಾಗಿ ಅಳವಡಿಸಿರುವ ಸುಮಾರು ಎರಡು ಲಕ್ಷ ಕೃಷಿ ಪಂಸೆಟ್ ಗಳ ವಿದ್ಯುತ್ ಸಂಪರ್ಕ ಸಕ್ರಮಗೊಳಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.