ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು ರಾಜ್ಯಾದ್ಯಂತ 100 ಹೈ-ಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಮುಂದಾಗಿದೆ.
ಕೃಷಿಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸುವ ಉದ್ದೇಶದಿಂದ ತಲಾ ₹1 ಕೋಟಿ ವೆಚ್ಚದಲ್ಲಿ 100 ಹೈ-ಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕೃಷಿ ಯಂತ್ರಧಾರೆ ಯೋಜನೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ರಾಜ್ಯಾದ್ಯಂತ 100 ಹೈಟೆಕ್ ಹಾರ್ವೆಸ್ಟರ್ ಹಬ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಪ್ರತಿ ಘಟಕಕ್ಕೆ 1 ಕೋಟಿ ರೂ. ಮೀರದಂತೆ ಶೇ. 70 ರಷ್ಟು ಸಹಾಯಧನ ನೀಡಲಾಗುವುದು. ಹಾರ್ವೆಸ್ಟರ್ ಹಬ್ ಸ್ಥಾಪಿಸಿ ಹೈಟೆಕ್ ಕೃಷಿ ಯಂತ್ರಗಳನ್ನು ಬಾಡಿಗೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.