alex Certify ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : 100 `ಹೈ-ಟೆಕ್ ಹಾರ್ವೆಸ್ಟರ್ ಹಬ್’ ಸ್ಥಾಪನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : 100 `ಹೈ-ಟೆಕ್ ಹಾರ್ವೆಸ್ಟರ್ ಹಬ್’ ಸ್ಥಾಪನೆ

ಬೆಂಗಳೂರು :  ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು ರಾಜ್ಯಾದ್ಯಂತ 100 ಹೈ-ಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಮುಂದಾಗಿದೆ.

ಕೃಷಿಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸುವ ಉದ್ದೇಶದಿಂದ ತಲಾ ₹1 ಕೋಟಿ ವೆಚ್ಚದಲ್ಲಿ 100 ಹೈ-ಟೆಕ್  ಹಾರ್ವೆಸ್ಟರ್‌ ಹಬ್‌ಗಳ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕೃಷಿ ಯಂತ್ರಧಾರೆ ಯೋಜನೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ರಾಜ್ಯಾದ್ಯಂತ 100 ಹೈಟೆಕ್ ಹಾರ್ವೆಸ್ಟರ್ ಹಬ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಪ್ರತಿ ಘಟಕಕ್ಕೆ 1 ಕೋಟಿ ರೂ. ಮೀರದಂತೆ ಶೇ. 70  ರಷ್ಟು ಸಹಾಯಧನ ನೀಡಲಾಗುವುದು. ಹಾರ್ವೆಸ್ಟರ್ ಹಬ್ ಸ್ಥಾಪಿಸಿ ಹೈಟೆಕ್ ಕೃಷಿ ಯಂತ್ರಗಳನ್ನು ಬಾಡಿಗೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...