ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ‘ಗೃಹಲಕ್ಷ್ಮಿ’ ಸಮಸ್ಯೆ ನಿವಾರಣೆಗೆ ಗ್ರಾಮದಲ್ಲೇ ಕ್ಯಾಂಪ್ ನಡೆಯಲಿದೆ.
ಹೌದು, ಗೃಹಲಕ್ಷ್ಮಿ ಯೋಜನೆಗಳ ಸಮಸ್ಯೆ ನಿವಾರಿಸಲು ಸರ್ಕಾರ ಯೋಚಿಸಿದ್ದು, ಡಿ.27 ರಿಂದ ಡಿ.29 ರವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್ ನಡೆಸಲು ಸುತ್ತೋಲೆ ಹೊರಡಿಸಲಾಗಿದೆ.
ಪಿಡಿಒಗಳ ನೇತೃತ್ವದಲ್ಲಿ ಕ್ಯಾಂಪ್ ಆಯೋಜನೆಯಾಗಲಿದ್ದು, ಈ ಕ್ಯಾಂಪ್ ನಲ್ಲಿ ಫಲಾನುಭವಿಗಳ ಸಮಸ್ಯೆ ಸರಿಪಡಿಸಲಾಗುತ್ತದೆ.ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಕ್ಯಾಂಪ್ ನಡೆಯಲಿದ್ದು, ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ಗಳು, ಅಂಗನವಾಡಿ ಕಾರ್ಯಕರ್ತರು ಭಾಗಿಯಾಗುವಂತೆ ಸೂಚಿಸಲಾಗಿದೆ.
ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಡಿ.27 ರಿಂದ ಡಿ. 29 ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಕ್ಯಾಂಪ್ ಆಯೋಜಿಸುವಂತೆ ಸೂಚನೆ ನೀಡಲಾಗಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರು ತಕ್ಷಣ ಗ್ರಾಮ ಪಂಚಾಯತ್ ಅಧಿಕಾರಿಗಳು, ಅಂಗನವಾಡಿ ಶಿಕ್ಷಕಿಯರನ್ನು ಸಂಪರ್ಕಿಸಬಹುದಾಗಿದೆ.
ಇದುವರೆಗೂ ಮೂರು ಕಂತಿನ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಏಕಕಾಲಕ್ಕೆ 6 ಸಾವಿರ ರೂ. ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪಿಡಿಒ ನೆರವು ಪಡೆದು ಎಲ್ಲಾ ಅರ್ಹ ಪಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಗ್ರಾಮ ಅದಾಲತ್ ಮೂಲಕ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಯಾರ ಖಾತೆಗೆ ಹಣ ವರ್ಗಾವಣೆ ಆಗಿಲ್ಲವೋ ಅಂತವರ ಹೆಸರುಗಳನ್ನು ಸಂಗ್ರಹಿಸಬೇಕು, ಆ ಲಿಸ್ಟ್ ಅನ್ನು ಸರ್ಕಾರಕ್ಕೆ ಕಳುಹಿಸಬೇಕು ಎಂದು ಸೂಚನೆ ನೀಡಲಾಗಿದೆ.