alex Certify ಕನ್ನಡಿಗರಿಗೆ ಮತ್ತೊಂದು ಗುಡ್ ನ್ಯೂಸ್ : `SSC’ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡಿಗರಿಗೆ ಮತ್ತೊಂದು ಗುಡ್ ನ್ಯೂಸ್ : `SSC’ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ!

ನವದೆಹಲಿ : ಕನ್ನಡಿಗರಿಗೆ ಸಿಬ್ಬಂದಿ ನೇಮಕಾತಿ ಆಯೋಗವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಮಲ್ಟಿ ಟಾಸ್ಕಿಂಗ್ ಸ್ಟಾಫ್ ನಾನ್ ಟೆಕ್ನಿಕಲ್, ಹವಾಲ್ದಾರ್ ಹುದ್ದೆಯ ಪರೀಕ್ಷೆಯನ್ನು ಕನ್ನಡ‌ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲೂ ಬರೆಯಲು ಅವಕಾಶ ನೀಡಲಾಗಿದೆ.

ಸಿಬ್ಬಂದಿ ನೇಮಕಾತಿ ಆಯೋಗ ಕಳೆದ ಹತ್ತು ದಿನಗಳ ಹಿಂದೆ ಹೊರಡಿಸಲಾದ ಅಧಿಸೂಚನೆ ಪ್ರಕಾರ, ಪರೀಕ್ಷೆಗೆ ದಿನಾಂಕ 30-6-2023ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ. ಅರ್ಜಿ ಸ್ವೀಕರಿಸುವ ಅಂತಿಮ ದಿನಾಂಕ 21-07-2023 (23:00 ಗಂಟೆಯವರೆಗೆ) ಪರೀಕ್ಷೆಗೆ ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.

ಮಲ್ಟಿ ಟಾಸ್ಕಿಂಗ್ ಸ್ಟಾಫ್ ನಾನ್ ಟೆಕ್ನಿಕಲ್ ಒಟ್ಟು ಹುದ್ದೆಗಳು -1198

ಹವಾಲ್ದಾರ್ ಒಟ್ಟು ಹುದ್ದೆಗಳು – 360

ಪರೀಕ್ಷೆ ನಡೆಯುವ ಸ್ಥಳಗಳು: ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ. ಹೆಚ್ಚಿನ ವಿವರಗಳಿಗೆ ವೆಬ್‌ ಸೈಟ್ www.ssckkr.kar.nic.in ಅಥವಾ https://ssc.nic.in ಸಂಪರ್ಕಿಸಬಹುದು

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...