ಮೈಸೂರು : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹಿರಿಯ ನಾಗರಿಕರ ಮನೆ ಬಾಗಿಲಿಗೆ ನೇರವಾಗಿ ಪಡಿತರ ತಲುಪಿಸುವ ಅನ್ನ ಸುವಿಧ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ನ್ಯಾಯಬೆಲೆ ಅಂಗಡಿಗೆ ಬರಲಾರದ 90 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕ ಮನೆ ಬಾಗಿಲಿಗೆ ನೇರವಾಗಿ ಪಡಿತರ ತಲುಪಿಸುವ ಅನ್ನ ಸುವಿಧ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 4.40 ಕೋಟಿ ಫಲಾನುಭವಿಗಳಿದ್ದಾರೆ. ಈ ಪೈಕಿ 90 ವರ್ಷ ಮೇಲ್ಪಟ್ಟ ಅಂದಾಜು 1 ಲಕ್ಷ ಕುಟುಂಬಗಳನ್ನು ಗುರುತಿಸಲಾಗಿದೆ. ಇವರ ಮನೆಗೆ ನೇರವಾಗಿ ರೇಷನ್ ತಲುಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.