
ಬೆಂಗಳೂರು : ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ನರೇಗಾ ಯೋಜನೆಯಡಿ ಶಾಲೆಗಳ ಮೂಲಸೌಕರ್ಯ ಕಾಮಗಾರಿಗಳ ನಿರ್ಮಿಸುವ ವಿದ್ಯಾಧಾಮ ಯೋಜನೆಗೆ ಚಾಲನೆ ನೀಡಲಾಗಿದೆ.
ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಸದೃಢಗೊಳಿಸಿ ನಾಡಿನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಗುರಿಯೊಂದಿಗೆ ನಮ್ಮ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ನರೇಗಾ ಯೋಜನೆಯ ಅಡಿಯಲ್ಲಿ ಶಾಲೆಗಳ ಮೂಲಸೌಕರ್ಯ ಕಾಮಗಾರಿಗಳ ನಿರ್ಮಿಸುವ ‘ವಿದ್ಯಾಧಾಮ’ ಯೋಜನೆಯು ಕಲ್ಬುರ್ಗಿ ಜಿಲ್ಲೆಯಲ್ಲಿ ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ಈ ಯೋಜನೆ ವಿಸ್ತಾರಗೊಳ್ಳಲಿದೆ.
