ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ವಿಶೇಷ ಕೇಂದ್ರಿಯ ನೆರವಿನಡಿ ಪಾಲಿಹೌಸ್/ನೆರಳುಮನೆ ಘಟಕ ಕಾರ್ಯಕ್ರಮಕ್ಕೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಜಿಲ್ಲೆಗೆ 07 ಗುರಿ ನಿಗದಿಪಡಿಸಿದ್ದು, ನಿಗದಿಪಡಿಸಿದ ಗುರಿಗೆ ತಕ್ಕಂತೆ ಅರ್ಜಿಗಳು ಬಂದಿರುವುದಿಲ್ಲ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತರು ಪರಿಶಿಷ್ಟ ಪಂಗಡದವರು ಷರತ್ತುಗಳಿಗೊಳಪಟ್ಟು ಡಿ.31ರೊಳಗಾಗಿ ಅರ್ಜಿಯನ್ನು ಜಿಲ್ಲಾ ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಷರತ್ತುಗಳು:
ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ವಯಸ್ಸು 18 ರಿಂದ 60ವರ್ಷಗಳ ಒಳಗಿರಬೇಕು. ಫಲಾನುಭವಿಗಳ ವಾರ್ಷಿಕ ಆದಾಯ ರೂ. 1.50 ಲಕ್ಷ ಒಳಗಿರಬೇಕು. ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು. ಅರ್ಜಿದಾರರಾಗಲೀ, ಕುಟುಂಬದ ಸದಸ್ಯರಾಗಲಿ ನಿಗಮದ ಯಾವುದೇ ಯೋಜನೆಯಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಘಟಕ ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಪ್ರಮಾಣ ಪತ್ರ/ಮುಚ್ಚಳಿಕೆ ಪತ್ರ ನೀಡಬೇಕು. ಬಿಪಿಎಲ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಹೊಂದಿರಬೇಕು ಮತ್ತು ಸ್ವಂತ ವ್ಯವಸಾಯ ಭೂಮಿ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ದೂ.08392-219190 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.