ತುಮಕೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದ ರೈತರಿಗೆ ಆಂಧ್ರ ಪ್ರದೇಶ ಮಾದರಿಯಲ್ಲಿ ಪರಿಹಾರ ನೀಡಲು ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ರೈತರಿಗೆ ಆಂಧ್ರಪ್ರದೇಶ ಮಾದರಿಯಲ್ಲಿ ಪರಿಹಾರ ನೀಡಲಾಗುವುದು. ಈ ಬಗ್ಗೆ ಚಿಂತನೆ ನಡೆಸಲಾಗಿದ್ದು, ಶೀಘ್ರವೇ ಇದನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರೈತರ ಸಾಲಮನ್ನಾದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಸಾಲಮನ್ನಾ ಯೋಜನೆ ಸರ್ಕಾರದ ಮುಂದಿಲ್ಲ. ಅಸಲು ಕಟ್ಟಿ, ಬಡ್ಡಿಯನ್ನು ಸರ್ಕಾರ ಕಟ್ಟುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಐದು ಎಕರೆವರೆಗೆ ಒಂದು ಎಕರೆಗೆ ಪರಿಹಾರ ನೀಡಲಾಗುವುದು ಎಂದರು.